Dboss: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಚಿತಾ ರಾಮ್ ಅವರನ್ನು ಯಾವ ಹೆಸರಿನಿಂದ ಕರೆಯುತ್ತಾರೆ ಗೊತ್ತಾ?

Dboss ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ರವರು 10 ವರ್ಷಗಳ ಹಿಂದೆ ಬಿಡುಗಡೆಯಾದಂತಹ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ನಾಯಕತ್ವದ ಹಾಗೂ ನಿರ್ಮಾಣದ ಬುಲ್ ಬುಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಪಾದರ್ಪಣೆ ಮಾಡುತ್ತಾರೆ ಹಾಗೂ ಅಂದಿನಿಂದ ಇಂದಿನವರೆಗೂ ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಯಾವುದಾದರೂ ನಟನ ಜೊತೆಗೆ ರಚಿತಾರಾಮ್ ರವರು ಪರ್ಫೆಕ್ಟ್ ಆಗಿ ಕಾಣಿಸಿಕೊಳ್ಳುತ್ತಾರೆ ಎಂದರೆ ಅದು ನಿಸ್ಸಂಶಯವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ಎನ್ನುವುದನ್ನು ಯಾವುದೇ ಅನುಮಾನ ಇಲ್ಲದೆ ಹೇಳಬಹುದು. ಇಬ್ಬರೂ ಕೂಡ ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ಇವರಿಬ್ಬರ ಜೋಡಿಯನ್ನು ಅಭಿಮಾನಿಗಳು ಹೆಚ್ಚಾಗಿ ಆನಂದಿಸುತ್ತಾರೆ.

ರಚಿತಾ ರಾಮ್ ರವರು ಕೂಡ ಈಗಾಗಲೇ ಚಿತ್ರರಂಗದಲ್ಲಿ 10 ವರ್ಷಗಳನ್ನು ಕಳೆದಿದ್ದು ಬಹುತೇಕ ಕನ್ನಡ ಚಿತ್ರರಂಗದ ಎಲ್ಲಾ ಸ್ಟಾರ್ ನಾಯಕ ನಟರ ಜೊತೆಗೂ ಕೂಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇಂದಿನ ಲೇಖನಿಯಲ್ಲಿ ನಾವು ಮಾತನಾಡಲು ಹೊರಟಿರುವುದು ರಚಿತಾರಾಮ್ ಅವರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರು ಏನೆಂದು ಕರೆಯುತ್ತಾರೆ ಎಂಬುದಾಗಿ.

ಇತ್ತೀಚಿಗಷ್ಟೇ ನಡೆದಿರುವ ಸಂದರ್ಶನದಲ್ಲಿ ದರ್ಶನ್ ಅವರು ರಚಿತಾ ರಾಮ್ ರವರ ಹೆಸರಿನ ಕೊನೆಯಲ್ಲಿ ರಾಮ್ ಎಂದು ಇದೆ ಎನ್ನುವ ಕಾರಣಕ್ಕಾಗಿ ಅವರನ್ನು ರಾಮಪ್ಪ ಎನ್ನುವುದಾಗಿ ಕರೆಯುತ್ತೇವೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಇವರಿಬ್ಬರ ನಡುವೆ ಇರುವಂತಹ ಈ ಸ್ನೇಹ ಸಂಬಂಧದ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ.

Leave a Comment