ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಸಾಕಷ್ಟು ಬೆಳವಣಿಗೆಯನ್ನು ಹೊಂದಿದೆ. ಆದರೆ ಚಿತ್ರರಂಗದಲ್ಲಿ ಸಂಭಾವನೆ ವಿಚಾರದಲ್ಲಿ ಯಾವ ಸ್ಟಾರ್ ನಟರು ಯಾವ ಸ್ಥಾನದಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇದೆ. ಹಾಗಿದ್ದರೆ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟರು ಯಾರ ಎಂಬುದನ್ನು ತಿಳಿದುಕೊಳ್ಳೋಣ.
ಹತ್ತನೇ ಸ್ಥಾನದಲ್ಲಿ ದುನಿಯಾ ವಿಜಯ್ ರವರು ಕಾಣಿಸಿಗುತ್ತಾರೆ. ಇತ್ತೀಚಿನ ದಿನಗಳಲ್ಲಿ ನಿರ್ದೇಶಕ ಹಾಗೂ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿರುವ ಇವರು ಬರೋಬ್ಬರಿ ಒಂದು ಸಿನಿಮಾಗೆ ಒಂದರಿಂದ ಮೂರು ಕೋಟಿ ರೂಪಾಯಿ ಪಡೆದುಕೊಳ್ಳುತ್ತಾರೆ. 9ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ರಕ್ಷಿತ್ ಶೆಟ್ಟಿ ಅವರು 2.45 ಕೋಟಿಯಿಂದ 3.50 ಕೋಟಿ ರೂಪಾಯಿ ಸಂಭಾವನೆಯನ್ನು ಒಂದು ಚಿತ್ರಕ್ಕಾಗಿ ಪಡೆದುಕೊಳ್ಳುತ್ತಾರೆ. ಎಂಟನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್ ರವರು ಪ್ರತಿ ಸಿನಿಮಾಗಳಿಗೆ ಮೂರರಿಂದ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.
ಏಳನೇ ಸ್ಥಾನದಲ್ಲಿ ಮಾಸ್ ಹೀರೋಗಳಲ್ಲಿ ಒಬ್ಬರಾಗಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಕಾಣಿಸಿಕೊಳ್ಳುತ್ತಾರೆ ಹಾಗೂ ಇವರು ಕೂಡ ಪ್ರತಿ ಸಿನಿಮಾಗಳಿಗೆ ಮೂರರಿಂದ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆರನೇ ಸ್ಥಾನದಲ್ಲಿ ಸ್ಟಾರ್ ನಿರ್ದೇಶಕ ಹಾಗೂ ನಟ ರಿಯಲ್ ಸ್ಟಾರ್ ಉಪೇಂದ್ರ ಒಂದು ಸಿನಿಮಾ ಗೆ ನಾಲ್ಕರಿಂದ ಐದು ಕೋಟಿ ರೂಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. 5ನೇ ಸ್ಥಾನದಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ ಒಂದು ಸಿನಿಮಾ ಗೆ 5 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ನಾಲ್ಕನೇ ಸ್ಥಾನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರತಿ ಸಿನಿಮಾಗಳಿಗೆ ಸಂಭಾವನೆ ರೂಪದಲ್ಲಿ ಬರೋಬ್ಬರಿ ಐದರಿಂದ ಆರು ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ.
ಮೂರನೇ ಹಾಗೂ ಎರಡನೇ ಸ್ಥಾನದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ತೂಗುದೀಪ್ ಶ್ರೀನಿವಾಸ್ ರವರು ಕಾಣಿಸಿಕೊಳ್ಳುತ್ತಾರೆ. ಇಬ್ಬರೂ ಕೂಡ ಒಂದು ಸಿನಿಮಾಗೆ 12 ರಿಂದ 16 ಕೋಟಿ ರೂಪಾಯಿವರೆಗೆ ಸಂಭಾವನೆಯನ್ನು ಪಡೆದುಕೊಳ್ಳುತ್ತಾರೆ. ಇನ್ನು ಮೊದಲ ಸ್ಥಾನದಲ್ಲಿ ಕೆಜಿಎಫ್ ಚಾಪ್ಟರ್ ಸರಣಿಗಳ ಮೂಲಕ ತಮ್ಮ ಜನಪ್ರಿಯತೆಯನ್ನು ದೇಶ ವಿದೇಶಗಳಲ್ಲಿ ಪಸರಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕಾಣಿಸಿಕೊಳ್ಳುತ್ತಾರೆ. ಇವರು ಒಂದು ಸಿನಿಮಾಗೆ 20 ಕೋಟಿ ಹಾಗೂ ಅದಕ್ಕಿಂತ ಮೇಲಿನ ಸಂಭಾವನೆಯನ್ನು ಪಡೆದುಕೊಳ್ಳುತ್ತಿದ್ದಾರೆ.