Rachita Ram ಮೊದಲು ಟಿವಿ ಧಾರವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟಿ ರಚಿತರಾಮ್ ರವರು ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನಟನೆಯ ಬುಲ್ ಬುಲ್ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆ ಆಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಮೊದಲ ಬಾರಿಗೆ ನಾಯಕಿ ಆಗಿಯೇ ಪಾದಾರ್ಪಣೆ ಮಾಡಿ ಮೊದಲು ಸಿನಿಮಾದಲ್ಲಿಯೇ ದೊಡ್ಡ ಮಟ್ಟದ ಯಶಸ್ಸು ಪಡೆಯುತ್ತಾರೆ.
ಅದಾದ ಮೇಲೆ ಒಂದಾದ ಮೇಲೆ ಒಂದರಂತೆ ಸಿನಿಮಾಗಳಲ್ಲಿ ನಟಿಸುತ್ತಾ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್ ಸ್ಟಾರ್ ನಟರ ಜೊತೆಗೂ ಕೂಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಡಿಂಪಲ್ ಕ್ವೀನ್ ರಚಿತಾ ರಾಮ್(Dimple Queen Rachita Ram). ಇಂದಿಗೂ ಕೂಡ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವಂತಹ ನಾಯಕ ನಟಿಯರಲ್ಲಿ ರಚಿತರಾಮ್ ರವರ ಮುಂದಿದ್ದಾರೆ.
ಇನ್ನು ಸದ್ಯಕ್ಕೆ ಕನ್ನಡ ಚಿತ್ರರಂಗದ ನಾಯಕ ನಟಿಯರಲ್ಲಿ ಅತ್ಯಂತ ಹೆಚ್ಚು ಸಿನಿಮಾಗಳನ್ನು ಹೊಂದಿರುವ ನಾಯಕನಟಿ ಕೂಡ ರಚಿತಾ ರಾಮ್ ರವರೆ ಆಗಿದ್ದಾರೆ. ಇನ್ನು ಇತ್ತೀಚಿನ ದಿನಗಳಲ್ಲಿ ಕೇಳಿ ಬಂದಿರುವ ಸುದ್ದಿಯ ಪ್ರಕಾರ ರಚಿತಾ ರಾಮ್ ರವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಹೌದು ಮಿತ್ರರೇ ಮೊದಲು 50 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ರಚಿತ(Rachita) ರವರು ಇತ್ತೀಚಿನ ದಿನಗಳಲ್ಲಿ 50 ಲಕ್ಷ ರೂಪಾಯಿಗಳಿಂದ 60 ಲಕ್ಷ ರೂಪಾಯಿಗಳ ವರೆಗೆ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರಚಿತಾ ರಾಮ್ ಅವರ ಸಂಭಾವನೆ ಹೆಚ್ಚಾಗಿರುವ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.