Gruha Lakshmi: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂದರೆ ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಗೃಹ ಲಕ್ಷ್ಮಿ (Gruha Lakshmi) ಯೋಜನಯಡಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಮನೆಯವರೇ ಅದರಲ್ಲಿ ಯಜಮಾನಿ ಯಾರೆಂದು ನಿರ್ಧರಿಸಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದೆ.
ಮನೆಯ ಯಜಮಾನಿ ಯಾರೆಂದು ತೀರ್ಮಾನಿಸುವ ಆಧಾರ್ ಕಾರ್ಡ್ ಮತ್ತು ಅದರ ಜೊತೆ ಲಿಂಕ್ ಇರುವ ಮೊಬೈಲ್ ನಂಬರ್, ರೇಷನ್ ಕಾರ್ಡ್ ಮತ್ತು ವೊಟರ್ ಐಡಿ (Voter ID )ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಆದೇಶಿಸಿದೆ.
ಸರ್ಕಾರದ ಆದೇಶದಂತೆ ಜೂನ್ 15 ರಿಂದ ಅರ್ಜಿಗಳನ್ನು ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು.ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಈ ಯೋಜನೆಯ ಸೌಲಭ್ಯ ದೊರಕುತ್ತದೆ.ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ. ಈ ಯೋಜನೆಯನ್ನು ಪಡೆಯುವವರು 2023 ರ ಜೂನ್ 15 ರಿಂದ ಜೂಲೈ 15 ರ ವರೆಗೆ ಅರ್ಜಿ ಸಲ್ಲಿಸಬಹುದು. ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು..
ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.ಈ ಯೋಜನೆಯ ಸೌಲಭ್ಯ ಪಡೆಯಲು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಆನ್ಲೈನ್ನಲ್ಲಿ ಗ್ರಾಮ ಒನ್ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರ ಅಥವಾ ಮೊಬೈಲ್ ಹಾಗೂ ಸೈಬರ್ ಕಂಪನಿ ಮುಖಾಂತರ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಾಡ ಕಚೇರಿಯಲ್ಲಿ ಕೂಡ ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇಂತಿವೆ.
ಬ್ಯಾಂಕ್ ಖಾತೆ ವಿವರಗಳು, ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ವಿಳಾಸ ಪುರಾವೆ, ನಿವಾಸ ಪ್ರಮಾಣಪತ್ರ. BPL ಅಥವಾ APL ಕುಟುಂಬದ ಮಹಿಳೆಯು ತಮ್ಮ ಬ್ಯಾಂಕ್ ಖಾತೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್ನಾ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿ, ತನ್ನನ್ನು ಮನೆಯ ಯಜಮಾನಿ ಎಂದು ಘೋಷಿಸಿಕೊಳ್ಳಬೇಕು. ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮನೆಯ ಯಜಮಾನಿಗೆ ಆರ್ಥಿಕವಾಗಿ ನೆರವು ನೀಡಿ ಅವರ ಕಷ್ಟಗಳಿಗೆ ಹೆಗಲಾಗಿ ನಿಲ್ಲಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ Free Electricity: ಸರ್ಕಾರದಿಂದ 200 ಯೂನಿಟ್ ಉಚಿತ ಪಡೆಯಲು ಅರ್ಜಿ ಎಲ್ಲಿ ಸಲ್ಲಿಸಬೇಕು? ಏನೆಲ್ಲಾ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ