ಇಲ್ಲಿದೆ ಕರ್ನಾಟಕ ಬಜೆಟ್ ನ ಮುಖ್ಯ ಅಂಶಗಳು !

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಹಾಗೂ ತಮ್ಮ 14ನೇ ಬಜೆಟ್ ಮಂಡಿಸುತ್ತಿದ್ದಾರೆ. ಸಿಎಂ ಆಗಿ ಮಂಡಿಸುತ್ತಿರುವ ಸಿದ್ದರಾಮಯ್ಯರ 7ನೇ ಬಜೆಟ್ ಇದಾಗಿದೆ.

ಬಜೆಟ್ ಭಾಷಣವನ್ನು ಆರಂಭಿಸಿರುವ ಸಿದ್ದರಾಮಯ್ಯ ಬೆಳಕಿಲ್ಲದ ಹಾದಿಯಲ್ಲಿ ನಡೆಯಬಹುದು, ಕನಸುಗಳಿಲ್ಲದ ಹಾದಿಯಲ್ಲಿ ನಡೆಯಲಿ ಹೇಗೆ? – ಇದು ಯಯಾತಿ ಎಂಬ ಅದ್ಭುತ ನಾಟಕದ ಫೇಮಸ್ ಡೈಲಾಗ್. ಈಗ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಸಹ ಹೇಳಿದರು.

2023-24 ರ ಹಣಕಾಸು ವರ್ಷದ ಎರಡನೇ ಬಜೆಟ್ ಇದಾಗಿದೆ. ಸುದೀರ್ಘ 3 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯವರು 14ನೇ ದಾಖಲೆಯ ಆಯವ್ಯಯ ಮಂಡಿಸಿದ್ದಾರೆ. 2018ರ ಫೆಬ್ರವರಿಯಲ್ಲಿ 13ನೇ ಆಯವ್ಯಯ ಮಂಡಿಸಿ ರಾಮಕೃಷ್ಣ ಹೆಗಡೆಯವರ ದಾಖಲೆಯನ್ನು ಸಿದ್ದರಾಮಯ್ಯ ಅವರು ಸರಿಗಟ್ಟಿದ್ದರು. ಮತ್ಯಾರೂ ತಮ್ಮನ್ನು ಸರಿಗಟ್ಟಲು ಸಾಧ್ಯವಾಗದ ಮಟ್ಟದ ದಾಖಲೆಯನ್ನು ಸಿದ್ದು ದಾಖಲಿಸುತ್ತಿದ್ದಾರೆ.

ರಾಜ್ಯದಲ್ಲಿರುವ 4.42 ಕೋಟಿ ಜನರಿಗೆ ಅನ್ನಭಾಗ್ಯ ಬಿಪಿಎಲ್ ಫಲಾನುಭವಿಗಳಿಗೆ ತಲಾ 10 ಕೇಜಿ ಅಕ್ಕಿ ವಿತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 10,000 ಕೋಟಿ ರೂಪಾಯಿ ವೆಚ್ಚವಾಗಲಿದೆ. ಕೇಂದ್ರ ಸರ್ಕಾರ ಗುರುತಿಸದ ಪಡಿತರಿಗೂ ತಲಾ 10 ಕೇಜಿ ಅಕ್ಕಿ ನೀಡಲಾಗುವುದು. ಅದಕ್ಕಾಗಿ ಸರ್ಕಾರ 1,650 ಕೋಟಿ ರೂ. ಹಣ ಭರಿಸಲಿದೆ.

ಕರ್ನಾಟಕ ಬಜೆಟ್ 2023-24 ಗಾತ್ರ: 3 ಲಕ್ಷದ 27 ಸಾವಿರ ಕೋಟಿ ರೂ.

5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು

ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ

ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ

ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ – ಡಿಕೆಶಿ ಖಾತೆಗೆ ಬಂಪರ್!

ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ
ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆ

1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 25 ಸಾವಿರ ಕೋಟಿ ರೂ. ತೆರಿಗೆ ಗುರಿ

ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ

ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ

ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ

ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ – ‘ಅನುಗ್ರಹ ಯೋಜನೆ’ ಮರು ಜಾರಿ

ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು

ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ

ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ

ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್

‘ಕೃಷಿ ಭಾಗ್ಯ ಯೋಜನೆ’ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.

Leave a Comment