2016ನೇ ಇಸ್ವಿಯಲ್ಲಿ ಮಿಸ್ ಸುಪ್ರನ್ಯಾಷನಲ್ ಆಗಿದ್ದ ಬೆಡಗಿ ಶ್ರೀನಿಧಿ ಶೆಟ್ಟಿ ಅವರಿಗೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಹಾಗೂ ಪ್ರಶಾಂತ್ ನಿಲ್ ನಿರ್ದೇಶನದ ಕೆಜಿಎಫ್ ಚಿತ್ರದ ಅವಕಾಶ ಹುಡುಕಿಕೊಂಡು ಬರುತ್ತದೆ. ಮಂಗಳೂರಿನ ಬೆಡಗಿಗೆ ಮೊದಲ ಸಿನಿಮಾದಲ್ಲಿಯೇ ಸೂಪರ್ ಸ್ಟಾರ್ ಹಾಗೂ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸುವ ಅವಕಾಶ ಹುಡುಕಿಕೊಂಡು ಬರುತ್ತದೆ ಎಂದರೆ ಅದು ಆಕೆಯ ಅದೃಷ್ಟವೇ ಎಂದು ಹೇಳಬಹುದಾಗಿದೆ.
ಕೆಜಿಎಫ್ ಚಾಪ್ಟರ್ 1 ಸಿನಿಮಾ ಎನ್ನುವುದು ಶ್ರೀನಿಧಿ ಶೆಟ್ಟಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಮೊದಲ ಸಿನಿಮಾದಲ್ಲಿ ದೊಡ್ಡದಾಗಿ ಗುರುತಿಸಿಕೊಳ್ಳುವ ಅವಕಾಶವನ್ನು ನೀಡುತ್ತದೆ. ಇದಾದ ನಂತರ ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲಿ ಕೂಡ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡು ರೀನಾ ಪಾತ್ರದಾರಿಯಾಗಿ ಎಲ್ಲರ ಮನ ಗೆಲ್ಲುತ್ತಾರೆ.
ಇನ್ನು ಕೆಜಿಎಫ್ ಚಾಪ್ಟರ್ 1 ಸಿನಿಮಾಗಾಗಿ ಸಂಭಾವನೆ ರೂಪದಲ್ಲಿ ಶ್ರೀನಿಧಿ ಶೆಟ್ಟಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಪಡೆದುಕೊಂಡಿರುತ್ತಾರೆ. ಎರಡನೇ ಭಾಗಕ್ಕಾಗಿ ಶ್ರೀನಿಧಿ ಶೆಟ್ಟಿ ಅದಾಗಲೇ ಜನಪ್ರಿಯತೆಯನ್ನು ಹೊಂದಿದ್ದರು ಹೀಗಾಗಿ 1.5 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದರು. ಕೆಜಿಎಫ್ ಸರಣಿ ಚಿತ್ರಗಳಲ್ಲಿ ನಟಿಸಿದ ನಂತರ ಅವರು ಚಿಯಾನ್ ವಿಕ್ರಂ ನಟನೆಯ ಕೋಬ್ರಾ ಸಿನಿಮಾದಲ್ಲಿ ಮಾತ್ರ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇತ್ತೀಚಿಗಷ್ಟೇ ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಿರುವ ಕೋಬ್ರಾ ಸಿನಿಮಾ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ.
ಇನ್ನು ಕೆಜಿಎಫ್ ಸರಣಿಗಳ ಆಧಾರದ ಮೇಲೆ ಅವರ ಮಾರುಕಟ್ಟೆ ಹಾಗೂ ಬೇಡಿಕೆ ಕೂಡ ಹೆಚ್ಚಾಗಿತ್ತು ಹೀಗಾಗಿ ಶ್ರೀನಿಧಿ ಶೆಟ್ಟಿ ಕೋಬ್ರಾ ಸಿನಿಮಾಗೆ ಕೂಡ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದರು. ಹೌದು ಮಿತ್ರರೇ ಕೋಬ್ರಾ ಸಿನಿಮಾಗೆ ಶ್ರೀನಿಧಿ ಶೆಟ್ಟಿ ಭರ್ಜರಿ ಎರಡು ಕೋಟಿ ರೂಪಾಯಿ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕೋಬ್ರಾ ಸಿನಿಮಾದ ನಂತರ ಯಾವ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ ಎಂಬುದಾಗಿ ಇದುವರೆಗೂ ಕೂಡ ತಿಳಿದು ಬಂದಿಲ್ಲ.